Home ಸುದ್ಧಿಗಳು ರಾಜ್ಯ ದ್ವಾರಕೀಶ್ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ದ್ವಾರಕೀಶ್ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

104
0

ಬೆಂಗಳೂರು, ಏ.16: ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಬಂಗಲ್ ಶಾಮರಾವ್ ದ್ವಾರಕನಾಥ್ ಅವರನ್ನು ಕನ್ನಡ ಚಿತ್ರರಂಗದಲ್ಲಿ ದ್ವಾರಕೀಶ್ ಎಂದೆ ಜನರು ಪ್ರೀತಿಯಿಂದ ಕರೆಯುತ್ತಿದ್ದರು. ಆಗಸ್ಟ್ 19, 1942 ರಲ್ಲಿ ಮೈಸೂರಿನಲ್ಲಿ ಜನಿಸಿದ ದ್ವಾರಕೀಶ್ ಅವರು ವೀರಸಂಕಲ್ಪ ಚಿತ್ರದಲ್ಲಿ ಮೊದಲ ಬಾರಿ ನಟಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.