Sunday, January 19, 2025
Sunday, January 19, 2025

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

Date:

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ.

ಈ ಪ್ಯಾಕೇಜ್‌ಗೆ ಒಟ್ಟು ರೂ. 25,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ರೂ.10,000 ಭರಿಸಲಾಗುತ್ತದೆ. ಹಾಗೂ ಸಹಾಯಧನ ರೂ. 5,000 ಒಳಗೊಂಡಿರುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ರೂ.10,000 ಮಾತ್ರ ಪಾವತಿಸಬೇಕಾಗುತ್ತದೆ.

ಪ್ರಯಾಣಿಸುವಾಗ ಆಧುನಿಕ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುತ್ತದೆ. 3 ಟೈರ್‌ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ.

ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕೀಯ ಸಹಾಯ ವ್ಯವಸ್ಥೆ ಇರುತ್ತದೆ. ಟಿಕೆಟ್‌ ಬುಕ್ಕಿಂಗ್‌ಗಾಗಿ https://www.irctctourism.com/Karnatakbgaurav?searchKey=&tagType=&travelType=Domestic&sector=All&bdar=6 ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9003140710, 8595931292, 8595931294, 9731641611, 8595931293, 8595931291 ಗೆ ಕರೆ ಮಾಡಬಹುದು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!