ಬೆಂಗಳೂರು, ಮಾ.7: ಶುಕ್ರವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ರಾಜಕೀಯ ಜೀವನದ 16ನೇ ಬಜೆಟ್ ಮಂಡಿಸಿದರು.
ಕರಾವಳಿ ಜಿಲ್ಲೆಗಳಿಗೆ ಏನಿದೆ? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಎರಡು ಸೇತುವೆಗಳ ನಿರ್ಮಾಣ. ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ. ಮಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರ ಸ್ಥಾಪನೆ. ಪಿಲಿಕುಳದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗೆ ರೂ. 2 ಕೋಟಿ. ಕರಾವಳಿ ಜಿಲ್ಲೆಗಳಲ್ಲಿ ಸಮುದ್ರ ಕೊರೆತ ತಡೆಗಟ್ಟಲು 200 ಕೋಟಿ ರೂ. ಅನುದಾನ. ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ ರೂ. 30 ಕೋಟಿ. ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಮೀರಿದ ಇಂಜಿನ್ ಬದಲಾವಣೆಗೆ ಗರಿಷ್ಠ 1 ಲಕ್ಷ ಸಹಾಯಧನ.
ಬಜೆಟ್ ವಿವರ: ಎತ್ತಿನಹೊಳೆ ಯೋಜನೆಯಡಿ ಮಧುಗಿರಿ ತಾಲ್ಲೂಕಿನ 45 ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆ ತುಂಬಿಸುವ ಯೋಜನೆ ರೂ.553 ಕೋಟಿ ಮೊತ್ತದಲ್ಲಿ ಅನುಷ್ಠಾನ. ಬಾಗಲಕೋಟೆ ಮತ್ತು ಕೋಲಾರದಲ್ಲಿ ಪಿಪಿಪಿ ಆಧಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ. ರಾಯಚೂರಿನಲ್ಲಿ ರೂ.50 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಪೆರಿಫರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ. ಬಿಸಿಯೂಟ ತಯಾರಿಕೆ ಸಿಬ್ಬಂದಿಗಳ ಗೌರವಧನ ರೂ. 1 ಸಾವಿರ ಹೆಚ್ಚಳ. ಶಾಲೆ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ. ರೂ.667 ಕೋಟಿ ವೆಚ್ಚದಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆ ಅನುಷ್ಠಾನ. ಬಿಎಂಟಿಸಿಗೆ 9 ಸಾವಿರ ವಿದ್ಯುತ್ ಚಾಲಿತ ಬಸ್ ಗಳು ಸೇರಿದಂತೆ ರಾಜ್ಯಾದ್ಯಂತ 14,750 ಹೊಸ ವಿದ್ಯುತ್ ಚಾಲಿತ ಬಸ್ ಗಳ ಸೇರ್ಪಡೆ. ಮೈಸೂರಿನ ಬನ್ನಿ ಮಂಟಪದಲ್ಲಿ ರೂ.120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣ. ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ ತಪಾಸಣೆ ಮೊತ್ತ ರೂ. 1500 ಗೆ, ಆಹಾರ ಭತ್ಯೆಯ ದರ ರೂ. 300 ಗೆ ಹೆಚ್ಚಳ. ಅರ್ಚಕರ ವಾರ್ಷಿಕ ತಸ್ತೀಕ್ ಮೊತ್ತ ರೂ. 72 ಸಾವಿರಗಳಿಗೆ ಹೆಚ್ಚಳ. ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಠತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ರೂ. 2500 ಕೋಟಿ ವೆಚ್ಚದ ಯೋಜನೆ ಜಾರಿ. ತೊಗರಿ ಉತ್ಪಾದನೆ ಉತ್ತೇಜನಕ್ಕೆ ರೂ.88 ಕೋಟಿ ನೆರವು. ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ. 50 ನೂತನ ಪಶು ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಕ್ರಮ. ಪ್ರಾಥಮಿಕ ಹಂತದಿಂದ ಪಿಯು ಹಂತದವರೆಗಿನ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ನೀಡುತ್ತಿರುವ ಮಾಸಿಕ ಗೌರವಧನ ತಲಾ ರೂ. 2 ಸಾವಿರ ಹೆಚ್ಚಳ. ಎಡಿಬಿ ನೆರವಿನಲ್ಲಿ ರೂ. 2500 ಕೋಟಿ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಲು ಕ್ರಮ.




By
ForthFocus™