Saturday, June 13, 2026
Saturday, June 13, 2026

ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Date:

ಬೆಂಗಳೂರು, ಜೂ. 3: ಕರ್ನಾಟಕದ ೨೫ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಅನ್ಯ ರಾಜ್ಯಗಳ ಮುಖ್ಯಮಂತ್ರಿಗಳು, ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು, ಸಂಸದರು, ಶಾಸಕರು, ವಿವಿಧ ಮಠಾಧೀಶರು, ಕ್ರೈಸ್ತ ಧರ್ಮಗುರುಗಳು, ಧಾರ್ಮಿಕ ಮುಖಂಡರು, ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ, ಮುಂತಾದವರು ಉಪಸ್ಥಿತರಿದ್ದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತ ಬಂಧುಗಳ ಆಶೀರ್ವಾದದಿಂದ ಲೋಕಭವನದಲ್ಲಿ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ.

ಇಂದು ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶವನ್ನು ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು.

ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ.

ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ಹೇಳಿದರು.

ಮಾಜಿ ಪ್ರಧಾನಿ, ಮಾಜಿ ಸಿಎಂ ನಿವಾಸಕ್ಕೆ ಭೇಟಿ: ಪ್ರಮಾಣವಚನ ಸ್ವೀಕರಿಸುವ ಮೊದಲು ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!