Thursday, December 12, 2024
Thursday, December 12, 2024

ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಕೃಷ್ಣ ಕೊಡುಗೆ ಮಹತ್ವದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಕೃಷ್ಣ ಕೊಡುಗೆ ಮಹತ್ವದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಂಗಳೂರು, ಡಿ.10: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಿಎಂ ಸಂತಾಪ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಡಿತ್ ಎಂ ವೆಂಕಟೇಶ್ ಕುಮಾರ್‌ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ

ವಿದ್ಯಾಗಿರಿ, ಡಿ.12: ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ...

ಕನ್ನಡ ಭವನ ಕಾಸರಗೋಡಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

ಉಡುಪಿ, ಡಿ.12: ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ...

ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ: ಕೃಷ್ಣ ಬೈರೇಗೌಡ

ಬೆಳಗಾವಿ, ಡಿ.11: ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು...

ಬಗರ್ ಹುಕುಂ ಅರ್ಜಿ ಪುನರ್ ಪರಿಶೀಲನೆ

ಬೆಳಗಾವಿ, ಡಿ.11: ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53,...
error: Content is protected !!