ಬೆಂಗಳೂರು, ಫೆ.8: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ಹೊಸ ವಿನ್ಯಾಸ ಅಶ್ವಮೇಧ ಕ್ಲಾಸಿಕ್ ಬಸ್ಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಈ ವರ್ಷ 1,000 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು, ಇದರ ಭಾಗವಾಗಿ 100 ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆ ಮೂಲಕ ಉಚಿತ ಸಾರಿಗೆ ಸೇವೆಯನ್ನು ಒದಗಿಸುವ ಜೊತೆಗೆ, ಎಲ್ಲರಿಗೂ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ನಮ್ಮ ಸರ್ಕಾರ ಮಾಡಿಕೊಡಲಿದೆ ಎಂದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಸ್.ಆರ್ ಶ್ರೀನಿವಾಸ್, ನಿಗಮದ ಅಧಿಕಾರಿಗಳು, ಶಾಸಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ‘ಅಶ್ವಮೇಧ ಕ್ಲಾಸಿಕ್ ಬಸ್’ ಲೋಕಾರ್ಪಣೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ‘ಅಶ್ವಮೇಧ ಕ್ಲಾಸಿಕ್ ಬಸ್’ ಲೋಕಾರ್ಪಣೆ
Date: