Friday, October 18, 2024
Friday, October 18, 2024

ಕೆ.ಎಸ್.ಆರ್.ಟಿ.ಸಿ ನಮ್ಮ ಕಾರ್ಗೋ ‘ಟ್ರಕ್ ಸೇವೆ’ ಆರಂಭ

ಕೆ.ಎಸ್.ಆರ್.ಟಿ.ಸಿ ನಮ್ಮ ಕಾರ್ಗೋ ‘ಟ್ರಕ್ ಸೇವೆ’ ಆರಂಭ

Date:

ಬೆಂಗಳೂರು, ಡಿ.24: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನೂತನವಾಗಿ ಪ್ರಾರಂಭಿಸಲಾದ ನಮ್ಮ ಕಾರ್ಗೋ- ‘ಟ್ರಕ್ ಸೇವೆ’ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಚಾಲನೆ ನೀಡಿದರು. 20 ನೂತನ ಟ್ರಕ್ಕುಗಳಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದ ಸಚಿವರು ಮಾತನಾಡುತ್ತಾ, ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್ಕುಗಳನ್ನು, ಒಂದು ವರ್ಷದೊಳಗಾಗಿ 500 ಟ್ರಕ್ಕುಗಳನ್ನು ಸೇರ್ಪಡೆ ಮಾಡಲಾಗುವುದು ಮತ್ತು ಪ್ರಸಕ್ತ ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮ‌ಕಾರ್ಗೋ ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆ ಮಾಡಲಾಗುವುದು. ಕಾರ್ಯಾಚರಣೆ ಹಾಗೂ ನಿರ್ವಹಣೆಗಾಗಿ ಘಟಕವನ್ನಾಗಿ ಬಳಸಿ , ಬಸ್ ನಿಲ್ದಾಣದಲ್ಲಿರುವ ಸ್ಥಳವನ್ನು ಸರ್ಕಾರಿ ಸಂಸ್ಥೆಗಳಿಗೆ ನೀಡಿ ವಾಣಿಜ್ಯ ಉಪಯೋಗಕ್ಕಾಗಿ ಬಳಸಲು ಉದ್ದೇಶಿಸಲಾಗಿದೆ. ಟ್ರಕ್ ಸೇವೆಯು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಯಿಂದ ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಿಗೆ ಲಭ್ಯವಿರುತ್ತದೆ ಎಂದು ಹೇಳಿದರು. ವಿ. ಅನ್ಬುಕುಮಾರ್, ಡಾ. ನಂದಿನಿ ದೇವಿ. ಕೆ., ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ನಿಗಮವು ಗ್ರಾಹಕರುಗಳ ಅಗತ್ಯತೆಗನುಗುಣವಾಗಿ ಟ್ರಕ್ ಸೇವೆ ಒದಗಿಸಲಿದ್ದು, ಇಚ್ಚೆಯುಳ್ಳ ಆಸಕ್ತ ಗ್ರಾಹಕರು ತಮ್ಮ ಅಗತ್ಯತೆಗಳ ಮಾಹಿತಿ / ವಿವರಗಳನ್ನು ಒದಗಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಕಾಲ್ ಸೆಂಟರ್ ಸಂಖ್ಯೆ – 080-26252625 ಇ-ಮೇಲ್ ವಿಳಾಸ – [email protected]

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!