Monday, November 25, 2024
Monday, November 25, 2024

ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಜು. 6: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದು, ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಕುಮಾರಸ್ವಾಮಿ ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆಯೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ.

ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿದೆ. ಇದು ನಮ್ಮಿಂದ ಶುರುವಾದುದಲ್ಲ, ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ. ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ನಡೆದಿರಲಿಲ್ಲವೇ? ಅವರೂ ಹಣ ಪಡೆದೇ ವರ್ಗಾವಣೆ ನಡೆಸಿದ್ದೇ?

ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಕುಮಾರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!