ತುಮಕೂರು, ಏ.28: ಚಿಕ್ಕನಾಯಕನಹಳ್ಳಿ ಪಟ್ಟಣದ ಲಕ್ಷ್ಮೀಶ್ ಸಿಆರ್ ಅವರನ್ನು ಮಕ್ಕಳ ಕಲ್ಯಾಣ ಸಮಿತಿ ತುಮಕೂರು ಜಿಲ್ಲೆ ಇದರ ಸದಸ್ಯರಾಗಿ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಲಕ್ಷ್ಮೀಶ್ ಸಿಆರ್ ರವರು ಸಮಾಜಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಸಮಾಜಕಾರ್ಯ ಉಪನ್ಯಾಸಕರಾಗಿ, ಮಹಿಳೆ ಮತ್ತು ಮಕ್ಕಳ ಕ್ಷೇತ್ರದ ಜೊತೆಗೆ ಸಮಾಜಕಾರ್ಯದ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಪಾಲನೆ, ಪೋಷಣೆ ಮತ್ತು ರಕ್ಷಣೆ ಅವಶ್ಯಕತೆ ಇರುವ ಮಕ್ಕಳ ಪರವಾಗಿ ಕೆಲಸ ನಿರ್ವಹಿಸಲಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಲಕ್ಷ್ಮೀಶ್ ಸಿಆರ್ ಆಯ್ಕೆ
ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಲಕ್ಷ್ಮೀಶ್ ಸಿಆರ್ ಆಯ್ಕೆ
Date:




By
ForthFocus™