Monday, March 16, 2026
Monday, March 16, 2026

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

Date:

ಬೆಂಗಳೂರು, ಜ.30: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು.

ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಾಗಲಿ. ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರಗಳು ಒಂದು ಮಾಧ್ಯಮ‌ವಾಗಿ ನೆರವಾಗಬೇಕು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಕಾಶ್ ರಾಜ್, ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯರಾದ ಚಿದಾನಂದ ಪಟೇಲ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ವಾಹನಗಳಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಸೂಚನೆ

ಕಟಪಾಡಿ, ಮಾ.16: ಕಟಪಾಡಿ ಬಳಿ ಹೆಚ್.ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ...

ನೂತನ 70 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಸು ಹಾಗೂ 45 ಕರ್ನಾಟಕ ಸಾರಿಗೆ ಬಸ್ಸುಗಳಿಗೆ ಚಾಲನೆ

ಬೆಂಗಳೂರು, ಮಾ.16: ನೂತನ 70 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಸು...

ಮಾ.19ರಿಂದ ಅಶ್ವತ್ಥಪುರದಲ್ಲಿ ಶ್ರೀರಾಮನವಮಿ ಮಹೋತ್ಸವ

ಮೂಡುಬಿದಿರೆ, ಮಾ.16: ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಮಾ.19ರಿಂದ 29ರ ವರೆಗೆ...

ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟ

ನವದೆಹಲಿ, ಮಾ.15: ಅಸ್ಸಾಂ, ಕೇರಳ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗಳು...
error: Content is protected !!