Home ಸುದ್ಧಿಗಳು ರಾಜ್ಯ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

1231
0

ಉಡುಪಿ, ಅ.5: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ ಹೊಸದು ಹಾಗೂ ನವೀಕರಣ, ಗಂಗಾಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶಿ ವ್ಯಾಸಾಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಅಡಿ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು www.kaushalkar.com ನಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಮದ್ರ ಕಚೇರಿಯ ದೂ.ಸಂಖ್ಯೆ: 080-22374848, ಮೊ.ನಂ: 7899899039 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಒಕ್ಕಲಿಗ ಸಮುದಾಯ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಒಕ್ಕಲಿಗ ಸಮುದಾಯದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ, ಗ್ರಾಮಒನ್ http://gramaone.karnataka.gov.in, ಬೆಂಗಳೂರು ಒನ್ https://www.karnatakaone.gov.in ಹಾಗೂ ಕರ್ನಾಟಕ ಒನ್ https://k1app.karnatakaone.gov.in ನಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ನಲ್ಲಿ ಅಕ್ಟೋಬರ್ 30 ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdc.karnataka.gov.in ಅಥವಾ ಇ-ಮೇಲ್ [email protected] ಅಥವಾ ದೂ.ಸಂಖ್ಯೆ: 080-29904350, 29904268 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಮರಾಠ ಸಮುದಾಯ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಈ ಕೆಳಕಂಡ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು-ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಶೈಕ್ಷಣಿಕ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ ತಂತ್ರಾಂಶ https://www.kaushalkar.com ರಲ್ಲಿ ಅಕ್ಟೋಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಹಾಯವಾಣಿ 8867537799, ದೂ.ಸಂಖ್ಯೆ: 080-29903994 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅಥವಾ ನಿಗಮದ ವೆಬ್‌ಸೈಟ್ https://kmcdc.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.