Friday, October 18, 2024
Friday, October 18, 2024

ನಾಡು-ನುಡಿ ಬಿಂಬಿಸುವ ಮಾದರಿ ಆಹ್ವಾನ

ನಾಡು-ನುಡಿ ಬಿಂಬಿಸುವ ಮಾದರಿ ಆಹ್ವಾನ

Date:

ಉಡುಪಿ, ಸೆ.21: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮ 50 ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರಗು ನೀಡಲು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ.

ಈ ಕಾರ್ಯಕ್ರಮ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ (ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ 25,000 ರೂ. ಗಳ ಬಹುಮಾನ ನಿಗದಿಪಡಿಸಲಾಗಿದ್ದು, ಲಾಂಛನ (ಲೋಗೋ)ದ ಮಾದರಿಯನ್ನು ಕಳುಹಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://www.kannadasiri.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!