Saturday, October 31, 2026
Saturday, October 31, 2026

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

Date:

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ, ಗಾಂಧಿ ಡಿಜಿಟಲ್ ಮ್ಯೂಸಿಯಂ ಮತ್ತು ಗಾಂಧಿ ಪುಸ್ತಕಗಳ ಲೋಕಾರ್ಪಣೆ’ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ, ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು ಹಾಗೂ ವಿವಿಧ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು.

ಸಚಿವರಾದ ರಿಜ್ವಾನ್‌ ಅರ್ಷದ್‌, ಹೆಚ್.ಸಿ. ಬಾಲಕೃಷ್ಣ, ಮಾಜಿ ಸಚಿವರಾದ ಹೆಚ್.ಕೆ. ಪಾಟೀಲ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ನಿವೃತ್ತ ನ್ಯಾಯಮೂರ್ತಿ ಟಿ.ಜಿ. ಶಿವಶಂಕರಗೌಡ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್, ಆಯುಕ್ತ ಎಂ.ಎನ್. ಅನುಚೇತ್ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ ಪ್ರಜಾಸೇವಾ ಆಂದೋಲನ ಸಭೆ

ಕಾಪು, ಅ.31: ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಉಡುಪಿ ವತಿಯಿಂದ ಶನಿವಾರ...

ಅಂಬಾಗಿಲು ಜಂಕ್ಷನ್ ನಲ್ಲಿ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ....
error: Content is protected !!