Home ಸುದ್ಧಿಗಳು ರಾಜ್ಯ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆ

139
0

ಬೆಂಗಳೂರು, ಏ.5: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಸಂಸದರಾದ ಎಸ್. ಶಿವರಾಮೇಗೌಡ, ಹರ್ಷ ಗೌಡ ಶಿವಶರಣ ಪಾಟೀಲ್, ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್, ಗಾಯತ್ರಿ ತಿಮ್ಮಾರೆಡ್ಡಿ, ಶ್ರೀನಿವಾಸ್, ತುಕಾರಾಂಗೌಡ ಪಾಟೀಲ, ಪ್ರಭುರಾಜ ಎಸ್ ಪಾಟೀಲ, ವೀರಭದ್ರಗೌಡ ಸೇರಿದಂತೆ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾದರು.

ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ರಾಧಾ ಮೋಹನದಾಸ್ ಅಗರ್ವಾಲ್, ವಿರೋಧ ಪಕ್ಷ ನಾಯಕರಾದ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವರಾದ ಸಿ.ಟಿ. ರವಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಖ್ಯಾತ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.