Home ಸುದ್ಧಿಗಳು ರಾಜ್ಯ ಸ್ಥಳೀಯ ಸಂಸ್ಥೆ ಉಪಚುನಾವಣೆ- ಬಿಜೆಪಿಗೆ ಭರ್ಜರಿ ಗೆಲುವು

ಸ್ಥಳೀಯ ಸಂಸ್ಥೆ ಉಪಚುನಾವಣೆ- ಬಿಜೆಪಿಗೆ ಭರ್ಜರಿ ಗೆಲುವು

397
0

ಬೆಂಗಳೂರು: ರಾಜ್ಯದ 51 ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿ ಭರ್ಜರಿ ಗೆಲುವನ್ನು ಸಾಧಿಸಿದೆ.

51 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದೆ. ಕಾಂಗ್ರೆಸ್ 15 ಸ್ಥಾನ ಗಳಿಸಿದೆ, ಜೆಡಿಎಸ್ ಎರಡು ಸ್ಥಾನಗಳು, ಇತರೆ ಪಕ್ಷಗಳು 2 ಹಾಗೂ ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಚಾಮರಾಜನಗರ ಫಲಿತಾಂಶ ವಿವರ: ಚಾಮರಾಜನಗರದ ಕೊಳ್ಳೆಗಾಲ ಪುರಸಭೆಯ 7 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ವಿಜಯಪುರ ಮಹಾನಗರ ಪಾಲಿಕೆಯ ಫಲಿತಾಂಶ ವಿವರ: ಬಿಜೆಪಿ 17, ಕಾಂಗ್ರೆಸ್ 10, ಜೆಡಿಎಸ್ 1, ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.