Sunday, January 19, 2025
Sunday, January 19, 2025

ಹೆಚ್ಚುವರಿ ಬಸ್ ಖರೀದಿಗೆ ಕ್ರಮ

ಹೆಚ್ಚುವರಿ ಬಸ್ ಖರೀದಿಗೆ ಕ್ರಮ

Date:

ಬೆಳಗಾವಿ, ಡಿ.19: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ ಬಸ್ ಗಳನ್ನು ಖರೀದಿಸಲಾಗುವುದು.

ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4,000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು.

ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರ ಅವರ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಕಾರ್ಮಿಕ ಸಚಿವರಾದ ಸ್ಂತೋಷ್ ಲಾಡ್ ಉತ್ತರ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!