Tuesday, December 3, 2024
Tuesday, December 3, 2024

ಕಾಫಿ ಬೆಳಗಾರರ ಸಮಸ್ಯೆ ಪರಿಹರಿಸಲು ಸಭೆ

ಕಾಫಿ ಬೆಳಗಾರರ ಸಮಸ್ಯೆ ಪರಿಹರಿಸಲು ಸಭೆ

Date:

ಚಿಕ್ಕಮಗಳೂರು, ಅ.22: ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಫಿ ಬೆಳಗಾರರ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳ ಮತ್ತು ಜನಪ್ರತಿನಿಧಿಗಳ ಸಭೆ ನಡೆಯಿತು.

ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು. ಕಾಫಿ ಬೆಳೆಗಾರರ ಭೂಮಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳು ಆನ್‌ಲೈನ್ ಮೂಲಕ ಹರಾಜು ಮಾಡುವುದನ್ನು ವಿರೋಧಿಸಿ ಸಂಸದರ ನೇತೃತ್ವದ ಸಭೆಯ ನಿರ್ಣಯದಂತೆ ಹರಾಜು ಪ್ರಕ್ರಿಯೆಯನ್ನು ಮುಂದೂಡಲು ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಹಾಗೂ ಈಗಾಗಲೇ ಬ್ಯಾಂಕುಗಳು ನಿರ್ಧರಿಸಿರುವ ಕಾಫಿ ಬೆಳೆಗಾರರ ಭೂಮಿಯ ಹರಾಜು ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಲು ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಕಾಫಿ ಬೆಳೆಗಾರರು ಹಲವು ರಾಷ್ಟ್ರೀಕೃತ ಬ್ಯಾಂಕುಗಳು ತಮ್ಮ ಭೂಮಿಯನ್ನು ಆನ್‌ಲೈನ್ ಮೂಲಕ ಸರ್ಫೇಸ್ ಕಾಯಿದೆಯಂತೆ ಹರಾಜು ಹಾಕುವುದನ್ನು ವಿರೋಧಿಸಿ ನಿರ್ಣಯಿಸಲಾಯಿತು. ಸರ್ಫೇಸ್ ಕಾಯ್ದೆಯಿಂದ ಆಗುವ ಸಮಸ್ಯೆಗಳ ಬಗ್ಗೆ ರಾಜ್ಯ ಮತ್ತು ಕೇಂದ್ರಗಳಲ್ಲಿ ಜನಪ್ರತಿನಿಧಿಗಳು ಚರ್ಚಿಸುತ್ತೇವೆಂದು ಮತ್ತು ಕಾಫಿ ಬೆಳೆಗಾರರು ಸಂಕಷ್ಟದಲ್ಲಿರುವಾಗ ಅವರ ಭೂಮಿಯನ್ನು ಹರಾಜು ಮಾಡಿದರೆ ರೈತರಿಗೆ ಬಹುದೊಡ್ಡ ಸಮಸ್ಯೆಗಳು ಆಗುತ್ತದೆ ಎಂದು ವಿವರಿಸಿ ಭೂ ಹರಾಜು ಮಾಡುವುದನ್ನು ನಿಗದಿಪಡಿಸಿದ ದಿನಾಂಕವನ್ನು ಅನಿರ್ದಿಷ್ಟಾವಧಿಯ ವರೆಗೆ ಮುಂದೂಡಲು ಸಂಸದರು ನಿರ್ದೇಶಿಸಿದರು.

ಸಭೆಯಲ್ಲಿ ಸ್ಥಳೀಯ ಶಾಸಕ ್ತಮ್ಮಯ್ಯ, ವಿಧಾನ ಪರಿಷತ್ ಶಾಸಕರಾದ ಸಿಟಿ ರವಿ, ವಿಧಾನ ಪರಿಷತ್ತಿನ ಉಪ ಸಭಾಪತಿ ಪ್ರಾಣೇಶ್, ರಾಷ್ಟ್ರೀಯ ಕಾಫಿ ಬೋರ್ಡ್ ಚೇರ್ಮನ್ ದಿನೇಶ್, ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್, ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸುಜೇಂದ್ರ, ಜಿಲ್ಲಾಧಿಕಾರಿಗ ಮೀನಾ ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೀರ್ತನ, ಮುಖಂಡರಾದ ದೀಪಕ್ ದೊಡ್ಡಯ್ಯ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!