ಬೆಂಗಳೂರು: ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿಮೀ ಮೆಟ್ರೋ ನೇರಳೆ ಮಾರ್ಗದ ಉದ್ಘಾಟನಾ ಸಮಾರಂಭ ಬೆಂಗಳೂರಿನಲ್ಲಿ ಭಾನುವಾರ ನಡೆಯಿತು.
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಹಾಗೂ ಕೇಂದ್ರ ವಸತಿ, ನಗರ ವ್ಯವಹಾರ, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು.
ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ, ಕೆ.ಗೋಪಾಲಯ್ಯ, ಮುನಿರತ್ನ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ಮುನಿರಾಜುಗೌಡ, ಲೆಹರ್ ಸಿಂಗ್ ಸಿರೋಯಾ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.