ಬೆಂಗಳೂರು, ಜೂ.19: ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರಕ್ಕೆ (ಎಮ್.ಎಸ್. ಪಿ.ಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಬುಧವಾರ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜುವಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರೀಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್. ಎಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದರಾಮಪ್ಪ ಉಪಸ್ಥಿತರಿದ್ದರು.
ಪೌಷ್ಟಿಕ ಆಹಾರ ತಯಾರಿಕೆ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ
ಪೌಷ್ಟಿಕ ಆಹಾರ ತಯಾರಿಕೆ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ
Date: