ಬೆಂಗಳೂರು: ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ (61) ಮಂಗಳವಾರ ತಡರಾತ್ರಿ ನಿಧನರಾದರು.
ರಾತ್ರಿ 11 ಗಂಟೆಗೆ ಸುಮಾರಿಗೆ ಸಚಿವ ಉಮೇಶ್ ಕತ್ತಿಯವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಸಚಿವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಬೆಂಗಳೂರಿನ ನಿವಾಸದಲ್ಲಿ ವಾಶ್ ರೂಮಿಗೆ ಹೋಗಿದ್ದಾಗ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ.
ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಸಚಿವ ಕತ್ತಿ ನಿಧನರಾದರು.
ಸಚಿವ ಉಮೇಶ್ ಕತ್ತಿ ಸಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.