ಬೆಂಗಳೂರು, ಜ.25: 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ 29ನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ಸುಮಾರು 5 ಗಂಟೆಗೆ ನಡೆದಿದೆ. ಪೊಲೀಸ್ ಅಧಿಕಾರಿ ಮಹೇಶ್ ಕನಕಗಿರಿ ಅವರು ನೀಡಿದ ಮಾಹಿತಿ ಪ್ರಕಾರ, ಬಾಲಕಿ ಮುಂಜಾನೆ 4 ಗಂಟೆಗೆ ಎಚ್ಚರವಾಗಿದ್ದಕ್ಕೆ ತಾಯಿ ಪ್ರಶ್ನಿಸಿದಾಗ ಬಾಲಕಿ ಯಾವುದೇ ಉತ್ತರ ನೀಡಲಿಲ್ಲ. 5 ಗಂಟೆ ಸುಮಾರಿಗೆ ದೊಡ್ಡ ಶಬ್ಧ ಕೇಳಿ ವಸತಿ ಸಮುಚ್ಚಯದ ಭದ್ರತಾ ಸಿಬ್ಬಂದಿ ಓಡಿ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಅಪ್ರಾಪ್ತ ಬಾಲಕಿಯ ಸಾವಿಗೆ ಕಾರಣ ಏನು ಎಂಬುದು ಇನ್ನೂ ಗೊತ್ತಾಗಲಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಕೂಡ ಇಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಹೇಶ್ ಕನಕಗಿರಿ ಹೇಳಿದ್ದಾರೆ.