ಬೆಂಗಳೂರು: ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು. ಗುರುವಾರ ಪಕ್ಷದ ರಾಜ್ಯ ಕಾರ್ಯಾಲಯದ ಹತ್ತಿರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ರವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಮಹೇಶ್ ಅವರ ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿ ಸೇರ್ಪಡೆಯಾದ ಶಾಸಕ ಮಹೇಶ್

ಬಿಜೆಪಿ ಸೇರ್ಪಡೆಯಾದ ಶಾಸಕ ಮಹೇಶ್
Date: