Wednesday, July 29, 2026
Wednesday, July 29, 2026

ಕೊರಗ ಸಮುದಾಯ ಹಾಗೂ ಟ್ಯಾಕ್ಸಿ ಅಸೋಸಿಯೇಶನ್ ಬೇಡಿಕೆ- ಸ್ಪೀಕರ್ ಯುಟಿ ಖಾದರ್ ಅವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಕೊರಗ ಸಮುದಾಯ ಹಾಗೂ ಟ್ಯಾಕ್ಸಿ ಅಸೋಸಿಯೇಶನ್ ಬೇಡಿಕೆ- ಸ್ಪೀಕರ್ ಯುಟಿ ಖಾದರ್ ಅವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಬೆಂಗಳೂರು, ಜು.24: ಉಡುಪಿಯಲ್ಲಿ ಕೊರಗ ಸಮುದಾಯದ ಸಂಘಟನೆಗಳು ತಮ್ಮ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು, ವಿದ್ಯಾವಂತ ನಿರುದ್ಯೋಗಿ ಯುವ ಜನತೆಗೆ ಅರ್ಹ ಉದ್ಯೋಗ ಹಾಗೂ ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ರವರನ್ನು ಭೇಟಿಯಾಗಿ ಕೊರಗ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಈಗಾಗಲೇ ರಾಜ್ಯ ಸರ್ಕಾರ ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಹಾಗೂ ಜಿಪಿಎಸ್ ಕಡ್ಡಾಯ ಅಳವಡಿಕೆಗೆ ನೀಡಿರುವ ಕಾಲಾವಕಾಶ ವಿಸ್ತರಣೆ ಸಹಿತ ವಿವಿಧ ಸಮಸ್ಯೆ ಹಾಗೂ ಟ್ಯಾಕ್ಸಿ ಅಸೋಸಿಯೇಶನ್ ಬೇಡಿಕೆಗಳ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದರು. ಕೊರಗ ಸಮುದಾಯ ಹಾಗೂ ಟ್ಯಾಕ್ಸಿ ಅಸೋಸಿಯೇಶನ್ ಬೇಡಿಕೆಗಳ ಬಗ್ಗೆ ಸದನದಲ್ಲಿ ಶೂನ್ಯ ವೇಳೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆಯಲು ಅವಕಾಶ ನೀಡುವಂತೆ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!