ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ನವೀನ್ ಜಯಭೇರಿ, ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವಿನ ನಗೆ, ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಆರ್. ರಾಜೇಂದ್ರ ಗೆಲುವು, ಬಳ್ಳಾರಿಯಲ್ಲಿ ಬಿಜೆಪಿಯ ವೈ ಸತೀಶ್ ಜಯ, ಕೊಡಗು- ಬಿಜೆಪಿಯ ಸುಜಾ ಕುಶಾಲಪ್ಪ ಗೆಲುವು, ಹಾಸನದಲ್ಲಿ ಎಚ್.ಡಿ.ರೇವಣ್ಣ ಅವರ ಪುತ್ರ ಜೆಡಿಎಸ್ ಅಭ್ಯರ್ಥಿ ಸೂರಜ್ ದೇವಣ್ಣ ಭರ್ಜರಿ ಗೆಲುವು, ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಜಯಭೇರಿ, ಶಿವಮೊಗ್ಗದಲ್ಲಿ ಡಿ.ಎಸ್. ಅರುಣ್ ಜಯ, ಬೆಂಗಳೂರಿನಲ್ಲಿ ಬಿಜೆಪಿಯ ಗೋಪಿನಾಥ ರೆಡ್ಡಿ ದಿಗ್ವಿಜಯ.
ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ್ ಗೆಲುವು. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ. ತನ್ಮೂಲಕ ಸತತ 4ನೇ ಬಾರಿ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ. ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಗೆಲುವಿನ ನಗೆಯೊಂದಿಗೆ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ವಿಧಾನ ಪರಿಷತ್ ಪ್ರವೇಶ ಪಡೆದುಕೊಂಡಿದ್ದಾರೆ.
ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 2, ಇತರ 1