ನವದೆಹಲಿ, ಆ.1: ಕೇಂದ್ರ ಸರ್ಕಾರದ ಬೆಳೆವಿಮೆ ಯೋಜನೆಗೆ ಅರ್ಜಿ ಹಾಕುವ ಅವಧಿಯನ್ನು ವಿಸ್ತರಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಮನವಿ ಸಲ್ಲಿಸಿದ್ದಾರೆ. . ಉಡುಪಿ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ರೈತಾಪಿ ವರ್ಗ ಕೇಂದ್ರ ಸರ್ಕಾರದ ಹವಾಮಾನ ಆಧಾರಿತ ಬೆಳೆ ವಿಮೆಯ ಸದುಪಯೋಗ ಪಡೆಯುತ್ತಿದ್ದು ಪ್ರಸ್ತುತ ಆನ್ಲೈನ್ ಅರ್ಜಿ ಪ್ರಾರಂಭವಾದ ಹಿನ್ನೆಲೆಯಲ್ಲಿ ಹಲವಾರು ತೊಡಕುಗಳಿಂದ ರೈತರಿಗೆ ದಾಖಲಾತಿಗಳೊಂದಿಗೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ. ಆದ್ದರಿಂದ ಜುಲೈ ತಿಂಗಳ ಅಂತ್ಯದಲ್ಲಿ ಮುಗಿಯುವ ಬೆಳೆ ವಿಮೆ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಬೇಕೆಂದು ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌವ್ಹಾನ್ ಅವರನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ಕೂಡಲೇ ಆದೇಶ ನೀಡುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬೆಳೆ ವಿಮೆ ಯೋಜನೆ ಅರ್ಜಿ ಅವಧಿ ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ
ಬೆಳೆ ವಿಮೆ ಯೋಜನೆ ಅರ್ಜಿ ಅವಧಿ ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ
Date: