Saturday, January 18, 2025
Saturday, January 18, 2025

ಮಾಜಿ ಸಚಿವ ಮಮ್ತಾಜ್ ಅಲಿ ಖಾನ್ ನಿಧನ

ಮಾಜಿ ಸಚಿವ ಮಮ್ತಾಜ್ ಅಲಿ ಖಾನ್ ನಿಧನ

Date:

ಲೇಖಕ, ಮಾಜಿ ಸಚಿವ ಪ್ರೊ. ಮಮ್ತಾಜ್ ಅಲಿ ಖಾನ್ ಸೋಮವಾರ ಮುಂಜಾನೆ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಪ್ರೊ. ಖಾನ್ ಸೋಮವಾರ ಮುಂಜಾನೆ ತಮ್ಮ ಬೆಂಗಳೂರಿನ ನಿವಾಸದಲ್ಲಿ ಕೊನೆಯುಸಿರೆಳೆದರು. ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಸ್ಫ್ ಖಾತೆ ಸಚಿವರಾಗಿದ್ದ ಅವರು 2008ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಕ್ರಿಯಾಶೀಲ ಸಚಿವರಾಗಿ ಗಮನ ಸೆಳೆದಿದ್ದರು. ಕೆಲವು ವರ್ಷಗಳ ಹಿಂದೆ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. 

ಕಳೆದ ಮೂರು ದಶಕಗಳಿಂದ ಬಡ ಮಕ್ಕಳ ಶಿಕ್ಷಣಕ್ಕಾಗಿ ಇವರು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ನಡೆಸುತ್ತಿದ್ದು ಅಲ್ಲಿ ಸಂಪೂರ್ಣ ಉಚಿತ ಶಿಕ್ಷಣದ ಜೊತೆಗೆ ಮಧ್ಯಾಹ್ನದ ಬಿಸಿಯೂಟ, ಶಾಲಾ ಪರಿಕರಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ಸಮಾಜಶಾಸ್ತ್ರದ ಪ್ರಾಧ್ಯಾಪಕರಾಗಿ ಅವರು ಸ್ವಯಂ ನಿವೃತ್ತಿಯನ್ನು ಪಡೆದಿದ್ದರು.

ಗಣ್ಯರ ಸಂತಾಪ: ವಿಧಾನ ಪರಿಷತ್ ಸದಸ್ಯರಾಗಿ, ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಪ್ರೊ. ಮಮ್ತಾಜ್ ಅಲಿ ಖಾನ್, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದರು. ಅವರ ನಿಧನದಿಂದ ಆತ್ಮೀಯ ಸ್ನೇಹಿತ ಹಾಗೂ ಸರಳ, ಸಜ್ಜನ ಚಿಂತನಾಶೀಲ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.  

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...

ಗಾನ ಸಂಭ್ರಮ 2025 ಸಂಪನ್ನ

ಕುಂದಾಪುರ, ಜ.18: ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ...

ರಾಷ್ಟ್ರಮಟ್ಟದ ಅಬಾಕಸ್‌: ಎಚ್.‌ಎಮ್.‌ಎಮ್ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ, ಜ.18: ಕುಂದಾಪುರ ಎಜ್ಯುಕೇಶನ್‌ ಸೊಸೈಟಿ (ರಿ.) ಪ್ರವರ್ತಿತ ಎಚ್.‌ಎಮ್‌. ಎಮ್‌...

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...
error: Content is protected !!