ಬೆಂಗಳೂರು, ಜ.15: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್‌ಡಿಎಲ್) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ರಸ್ತೆ ಬದಿಯ 10 ಎಕರೆ ಪ್ರದೇಶದಲ್ಲಿ ಶೀಘ್ರವೇ ಮೈಸೂರು ಸ್ಯಾಂಡಲ್ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದೆ. ಈ ಘಟಕ ಆರಂಭದಿಂದ 400 ಕ್ಕೂ ಜನರಿಗೆ ಉದ್ಯೋಗ ಸಿಗಲಿದೆ. ಉತ್ತರ ಕರ್ನಾಟಕದ ಜನರಿಗೆ ಮಾತ್ರವಲ್ಲದೇ ಮಹಾರಾಷ್ಟ್ರದವರೆಗೂ ಗುಣಮಟ್ಟದ ಸಾಬೂನು, ಇತರೆ ಉತ್ಪನ್ನ ಲಭ್ಯವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಟೀಲ್ ತಿಳಿಸಿದ್ದಾರೆ.
ಶೀಘ್ರದಲ್ಲೇ ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಉತ್ಪಾದನಾ ಘಟಕ
ಶೀಘ್ರದಲ್ಲೇ ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಉತ್ಪಾದನಾ ಘಟಕ
Date: