ಉಡುಪಿ, ಸೆ.24: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಮೈಸೂರಿನ ಹಳೆ ಡಿ.ಸಿ. ಕಚೇರಿ ಎದುರಿನ ಸೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟಂಬರ್ 30 ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ [email protected] ಮೂಲಕವೂ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ದೂ.ಸಂಖ್ಯೆ :080- 22484516, 22107704 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ
ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ
Date: