Tuesday, October 15, 2024
Tuesday, October 15, 2024

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

Date:

ಉಡುಪಿ, ಸೆ.24: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಮೈಸೂರಿನ ಹಳೆ ಡಿ.ಸಿ. ಕಚೇರಿ ಎದುರಿನ ಸೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟಂಬರ್ 30 ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ [email protected] ಮೂಲಕವೂ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ದೂ.ಸಂಖ್ಯೆ :080- 22484516, 22107704 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!