Wednesday, July 29, 2026
Wednesday, July 29, 2026

ವಿಜೃಂಭಣೆಯಿಂದ ನಡೆಯಲಿದೆ ಮೈಸೂರು ದಸರಾ

ವಿಜೃಂಭಣೆಯಿಂದ ನಡೆಯಲಿದೆ ಮೈಸೂರು ದಸರಾ

Date:

ಮೈಸೂರು, ಅ.2: ಅಕ್ಟೋಬರ್‌ 3 ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಸಂಜೆ ಅರಮನೆ ಮುಂಭಾಗ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅರಮನೆ ವೇದಿಕೆಯಲ್ಲಿ ಅಕ್ಟೋಬರ್‌ 3 ರಿಂದ ಅಕ್ಟೋಬರ್‌ 10ರ ವರೆಗೆ ಹಾಗೂ ಜಗನ್ಮೋಹನ ಅರಮನೆ, ನಂಜನಗೂಡು ನಂಜುಂಡೇಶ್ವರ ದೇವಸ್ಥಾನದ ಆವರಣ ಸೇರಿದಂತೆ ಮೊದಲಾದ ವೇದಿಕೆಗಳಲ್ಲಿ ಅಕ್ಟೋಬರ್‌ 11ರ ವರೆಗೆ ಸಂಗೀತ, ನೃತ್ಯ, ನಾಟಕ, ಪೌರಾಣಿಕ, ರಂಗಭೂಮಿ ಮೊದಲಾದ ಕಲಾಪ್ರಕಾರಗಳನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್‌. ಸಿ. ಮಹದೇವಪ್ಪ ತಿಳಿಸಿದ್ದಾರೆ.

ಅಕ್ಟೋಬರ್‌ 3 ರಿಂದ 12ರ ವರೆಗೆ ನಡೆಯಲಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ 508 ಕಲಾತಂಡಗಳ 6,500 ಕಲಾವಿದರಿಗೆ ವಿವಿಧ 11 ವೇದಿಕೆಗಳಲ್ಲಿ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!