Tuesday, January 21, 2025
Tuesday, January 21, 2025

ಈ ಬಾರಿ ವಿಜೃಂಭಣೆಯಿಂದ ನಡೆಯಲಿದೆ ಮೈಸೂರು ದಸರಾ

ಈ ಬಾರಿ ವಿಜೃಂಭಣೆಯಿಂದ ನಡೆಯಲಿದೆ ಮೈಸೂರು ದಸರಾ

Date:

ಮೈಸೂರು, ಆ.14: ಕಳೆದ ವರ್ಷ ಬರಗಾಲದ ಕಾರಣ ದಸರಾ ಅದ್ಧೂರಿಯಿಂದ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲ ಜಲಾಶಯಗಳು ತುಂಬಿವೆ. ಹೀಗಾಗಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವಾಗಿ ಆಚರಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಅಕ್ಟೋಬರ್‌ 3 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡ ಆರಂಭಿಸಲು ಸೂಚಿಸಲಾಗಿದೆ. ಆಗಸ್ಟ್‌ 21ರಂದು ಬೆಳಗ್ಗೆ 10.10 ಗಂಟೆಯಿಂದ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್‌ 3 ರಿಂದ 12ರ ವರೆಗೆ ದಸರಾ ಉತ್ಸವ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10 ನೇ ದಿನ ಜಂಬೂ ಸವಾರಿಗೆ ಏರ್ಪಾಡು ಮಾಡಲಾಗುತ್ತದೆ.

ಅಕ್ಟೋಬರ್‌ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ. ಈ ಬಾರಿ ದಸರಾ ದೀಪಾಲಂಕಾರ 21 ದಿನಗಳವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಮೈಸೂರಿನಲ್ಲಿ 130 ಕಿ.ಮೀ. ರಸ್ತೆಗಳ ಉದ್ದಕ್ಕೂ ದೀಪಗಳು ಬೆಳಗಲಿವೆ. 84 ವೃತ್ತಗಳು, ಉದ್ಯಾನವನ ಸೇರಿ ಪ್ರಮುಖ 64 ಸ್ಥಳಗಳಲ್ಲಿ ವಿದ್ಯುತ್‌ ದೀಪಗಳು ಝಗಮಗಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!