Sunday, October 11, 2026
Sunday, October 11, 2026

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

Date:

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು ದಸರಾ ಮಹೋತ್ಸವಕ್ಕೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಶುಭ ಧನುರ್ ಲಗ್ನದಲ್ಲಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಗಳರು, ನಿಸರ್ಗವನ್ನು ಆರಾಧಿಸುವ ಪರ್ವಕಾಲವೇ ನವರಾತ್ರಿ. ನಾಡಿನ ನೆಲ, ಜಲವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ದಸರಾ ಮಹೋತ್ಸವ ಕೇವಲ ಹಬ್ಬವಲ್ಲ, ಅದು ಕನ್ನಡಿಗರ ಅಸ್ಮಿತೆ, ಪರಂಪರೆ ಮತ್ತು ಸಾಂಸ್ಕೃತಿಕ ಗರಿಮೆಯ ಭವ್ಯ ಪ್ರತೀಕ. ಸಂಸ್ಕೃತಿ, ಕಲೆ, ಸಾಹಿತ್ಯ ಮತ್ತು ಐತಿಹಾಸಿಕ ಪರಂಪರೆಯ ದಿವ್ಯ ಸಂಗಮವಾದ ನಾಡಹಬ್ಬವೇ ಮೈಸೂರು ದಸರಾ ಎಂದು ಹೇಳಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ದಸರಾ ಪರಿವರ್ತನೆಯಾಗಿದೆ. ಈಗ ನಡೆಯುತ್ತಿರುವುದು ಪ್ರಜಾ ದರ್ಬಾರಿನ ದಸರಾ. ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯುತ್ತಿದ್ದೇವೆ. ದಸರಾ ಹಬ್ಬದ ಸಂಭ್ರಮ ಮೈಸೂರಿಗೆ ಮಾತ್ರ ಸೀಮಿತವಾಗದೆ ಇಡೀ ರಾಜ್ಯಕ್ಕೆ ಹರಡಿಕೊಂಡಿದೆ. ಮುಂದಿನ 11 ದಿನಗಳ ಕಾಲ ಮೈಸೂರಿನ ಮೂಲಕ ಭಾರತವನ್ನು ನೋಡಲಾಗುತ್ತದೆ. ಭಾರತೀಯ ಪರಂಪರೆಗೆ ಕನ್ನಡಿ ಹಿಡಿಯುವ ಈ ಮಹೋತ್ಸವ ನಾಡಿನ ಹೆಮ್ಮೆಯ ಸಂಕೇತವಾಗಿದೆ.

ವಿಜಯನಗರದಿಂದ ಮೈಸೂರು ಒಡೆಯರವರೆಗೆ ಸಾಂಸ್ಕೃತಿಕ ಪಯಣ: ವಿಜಯನಗರದ ಅರಸರು ಆರಂಭಿಸಿದ ದಸರಾ ಪರಂಪರೆಯನ್ನು ಮೈಸೂರು ಒಡೆಯರು ಮುಂದುವರಿಸಿ, ಅದರ ಸಾಂಸ್ಕೃತಿಕ ದೀಪ ಆರದಂತೆ ಕಾಪಾಡಿದರು. ಅರಸರು ದಸರಾವನ್ನು ಕೇವಲ ಪೂಜೆ ಮತ್ತು ಧಾರ್ಮಿಕ ಆಚರಣೆಗಳಿಗೆ ಸೀಮಿತಗೊಳಿಸದೆ, ಕಲೆ ಮತ್ತು ಸಂಸ್ಕೃತಿಗೆ ಪ್ರೋತ್ಸಾಹ ನೀಡುವ ವೇದಿಕೆಯನ್ನಾಗಿ ರೂಪಿಸಿದರು. ಮುಖ್ಯಮಂತ್ರಿಯಾಗಿ ನಾಡಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅವಕಾಶ ದೊರೆತಿರುವುದು ನನ್ನ ಬದುಕಿನ ಸ್ಮರಣೀಯ ದಿನ ಎಂದು ಹೇಳಿದರು. ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ, ಸಚಿವರು, ಶಾಸಕರು, ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...

ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರಿಗೆ ಹಾಗೂ ಪರಿಚಾರಕರಿಗೆ ಗೌರವ ಸನ್ಮಾನ

ಕಟಪಾಡಿ, ಅ.11: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಎಸ್.ಸಿ ಮೋರ್ಚಾದ...
error: Content is protected !!