Friday, September 20, 2024
Friday, September 20, 2024

ನಾಗಮಂಗಲ ಗಣೇಶ ವಿಸರ್ಜನೆ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಗಮಂಗಲ ಗಣೇಶ ವಿಸರ್ಜನೆ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಂಗಳೂರು, ಸೆ.12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!