Wednesday, September 9, 2026
Wednesday, September 9, 2026

ನಂದಿನಿ ಈಗ ದೇಶದ ಅತ್ಯುನ್ನತ ಬ್ರ್ಯಾಂಡ್‌

ನಂದಿನಿ ಈಗ ದೇಶದ ಅತ್ಯುನ್ನತ ಬ್ರ್ಯಾಂಡ್‌

Date:

ಬೆಂಗಳೂರು, ಜೂ.28: ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು ಮೂಡಿಸಿದ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ನಂದಿನಿ! ಅಪ್ಪಟ ಕನ್ನಡ ಬ್ರ್ಯಾಂಡ್‌ ನಂದಿನಿಯು 1,079 ಮಿಲಿಯನ್‌ ಡಾಲರ್ (ರೂ. 9,009.65 ಕೋಟಿ) ಮೌಲ್ಯದೊಂದಿಗೆ ‘ಬ್ರ್ಯಾಂಡ್‌ ಫೈನಾನ್ಸ್‌ 2025’ರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಏರಿದೆ. ಕಳೆದ ವರ್ಷ ನಂದಿನಿ ಭಾರತದ ಟಾಪ್‌ 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿತ್ತು. ಬ್ರ್ಯಾಂಡ್‌ ಫೈನಾನ್ಸ್‌ ಲಂಡನ್‌ ಮೂಲದ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಯಾಗಿದೆ.

ಆಹಾರ ಮತ್ತು ಪಾನೀಯ ವಿಭಾಗದಲ್ಲಿ 4ನೇ ಸ್ಥಾನ ಪಡೆದಿರುವ ನಂದಿನಿಯು ಅಮುಲ್‌, ಬ್ರಿಟಾನಿಯಾ ಮತ್ತು ಮದರ್‌ ಡೈರಿಗಳಂತಹ ದೊಡ್ಡದೊಡ್ಡ ಬ್ರ್ಯಾಂಡ್‌ಗಳ ಜೊತೆಗೆ ಸ್ಪರ್ಧಿಸುತ್ತಿದೆ. ನಂದಿನಿಯು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಸರ್ಕಾರದ ಸಂಕಲ್ಪ, ರೈತರ ಶ್ರಮ ಮತ್ತು ಹೆಚ್ಚುತ್ತಿರುವ ಗ್ರಾಹಕರ ವಿಶ್ವಾಸಾರ್ಹತೆಯ ಪ್ರತಿಬಿಂಬವಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!