ಬೆಂಗಳೂರು, ಮಾ.1: ಸಾರಿಗೆ ಇಲಾಖೆ ಹಾಗೂ ಬೆಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ ಜಂಟಿಯಾಗಿ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ದಿನಾಚರಣೆ 2024’ರ ಸಮಾರೋಪ ಸಮಾರಂಭ ನಡೆಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭಾಗವಹಿಸಿ ಮಾತನಾಡುತ್ತಾ, ರಾಜ್ಯಾದ್ಯಂತ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗಿದ್ದು ಅದರಡಿ ವಾಹನ ಚಾಲನೆ ಮಾಡುವಾಗ ಪಾಲಿಸಬೇಕಾದ ನಿಯಮಗಳ ಕುರಿತಂತೆ ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯವನ್ನು ರಸ್ತೆ ಅಪಘಾತ ಮುಕ್ತಗೊಳಿಸಲು ಪ್ರಾಧಿಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.
ಶಾಸಕ ರಿಜ್ವಾನ್ ಅರ್ಷದ್, ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್ ಅನುಚೇತ್, ಆಯುಕ್ತರಾದ ಯೋಗೇಶ್, ಅಪರ ಸಾರಿಗೆ ಆಯುಕ್ತರಾದ ಪುರುಷೋತ್ತಮ್, ಉಮಾಶಂಕರ್, ಸಿ. ಮಲ್ಲಿಕಾರ್ಜುನ್, ಹೇಮಂತ್ ಕುಮಾರ್, ಜ್ಞಾನೇಂದ್ರ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.