Tuesday, September 29, 2026
Tuesday, September 29, 2026

ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗೆ ತರಬೇತಿ

ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗೆ ತರಬೇತಿ

Date:

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರು (ಜೆಆರ್‌ಎಫ್) ಹಾಗೂ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ಜೂನ್ 10 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5.00 ಗಂಟೆಯೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಜಯಂಟ್ಸ್ ಗ್ರೇಟ್ ಡೇ ಕಾರ್ಯಕ್ರಮ

ಬ್ರಹ್ಮಾವರ, ಸೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಜಯಂಟ್ಸ್ ಕೇರ್ ಫೌಂಡೇಶನ್...
error: Content is protected !!