Tuesday, October 15, 2024
Tuesday, October 15, 2024

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

Date:

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಆ್ಯಂಬುಲೆನ್ಸ್‌ಗಳ ಸೇವೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.‌ ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಆ್ಯಂಬುಲೆನ್ಸ್‌ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ.

ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಆ್ಯಂಬುಲೆನ್ಸ್‌ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿದ್ದು, ಅಂತಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಆ್ಯಂಬುಲೆನ್ಸ್‌ಗಳನ್ನು ನೀಡಲಾಗಿದೆ.

ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್‌.ಎಂ.ರೇವಣ್ಣ ಸೇರಿ ಹಲವು ನಾಯಕರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!