Monday, November 25, 2024
Monday, November 25, 2024

ಹೊಸ ವರ್ಷಾಚರಣೆ- ಸರ್ಕಾರದ ಮಾರ್ಗಸೂಚಿ ಪ್ರಕಟ

ಹೊಸ ವರ್ಷಾಚರಣೆ- ಸರ್ಕಾರದ ಮಾರ್ಗಸೂಚಿ ಪ್ರಕಟ

Date:

ಬೆಳಗಾವಿ: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸಭೆ ಸೋಮವಾರ ನಡೆಯಿತು.

ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ:

* ಹೊಸ ವರ್ಷದ ಸಂಭ್ರಮಾಚರಣೆಯ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

* ರೆಸ್ಟೋರೆಂಟ್, ಬಾರ್ ಹಾಗೂ ಪಬ್ ಗಳಲ್ಲಿ ರಾತ್ರಿ 1 ಗಂಟೆಯ ನಂತರ ಹೊಸ ವರ್ಷದ ಸಂಭ್ರಮಾಚರಣೆ ನಿಷೇಧಿಸಲಾಗಿದೆ.

* ಬೆಂಗಳೂರು ಹಾಗೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಲ್ಲಿ ಶೇ. 2 ರಷ್ಟು ಜನರಿಗೆ ಕೋವಿಡ್ ಪರೀಕ್ಷೆ ಮಾಡುವುದರ ಜೊತೆಗೆ, ಸಿ.ಟಿ ವ್ಯಾಲ್ಯೂ 25 ಕ್ಕಿಂತ ಕಡಿಮೆ ಇರುವ ಪ್ರಕರಣಗಳ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಿಕೊಡಲಾಗುವುದು.

* ಬೂಸ್ಟರ್ ಡೋಸ್ ಲಸಿಕೆಯ ವ್ಯಾಪ್ತಿಯನ್ನು ಆದಷ್ಟು ಶೀಘ್ರದಲ್ಲಿ ಶೇ. 50 ರಷ್ಟು ಹೆಚ್ಚಿಸಲು ಹಾಗೂ ಸಮರೋಪಾದಿಯಲ್ಲಿ ಪ್ರತಿಯೊಬ್ಬರಿಗೂ ಮೂರನೇ ಡೋಸ್ ತಲುಪಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ರಚಿಸಲಾಗಿದೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!