Home ಸುದ್ಧಿಗಳು ರಾಜ್ಯ ಡಿ. 28 ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ

ಡಿ. 28 ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ

2888
0

ಬೆಂಗಳೂರು: ರಾಜ್ಯಾದ್ಯಂತ ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು. ಸಭೆಯ ಬಳಿಕ ಆರೋಗ್ಯ ಸಚಿವ ಡಾ. ಸುಧಾಕರ್ ಮಾಧ್ಯಮದ ಜೊತೆಗೆ ಮಾತನಾಡುತ್ತಾ ಸಭೆಯ ಮುಖ್ಯಾಂಶಗಳನ್ನು ನೀಡಿದರು.

ಸಭೆಯ ಮುಖ್ಯಾಂಶಗಳು:

* ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ.

* ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ಹೊಸ ವರ್ಷಾಚರಣೆ ನಿಷೇಧ.

* ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಬಾರ್ ಗಳು ಗರಿಷ್ಠ ಶೇ. 50% ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಬಹುದು. ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಆರ್ ಟಿ-ಪಿಸಿಆರ್ ನೆಗಟಿವ್ ವರದಿ ಹೊಂದಿರಬೇಕು ಮತ್ತು 2 ಡೋಸ್ ಲಸಿಕೆ ಪಡೆದಿರಬೇಕು.

* ಮದುವೆ, ಸಭೆ, ಸಮಾರಂಭಗಳಲ್ಲಿ 300ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.

* ರಾಜ್ಯಾದ್ಯಂತ ಶೇಕಡ 97 ರಷ್ಟು ಜನರು ಮೊದಲ ಡೋಸ್ ಪಡೆದಿದ್ದು ಇದನ್ನು ಶೇಕಡ ನೂರರಷ್ಟಾಗಲು ಸಮರೋಪಾದಿಯಲ್ಲಿ ಲಸಿಕಾಕರಣಕ್ಕೆ ಶೀಘ್ರದಲ್ಲಿ ಕ್ರಮ.

* ಜನವರಿ 3 ರಿಂದ ರಾಜ್ಯದಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆಯನ್ನು ಪ್ರಾರಂಭಿಸಲಾಗುವುದು. ಒಟ್ಟು 43 ಲಕ್ಷ ಮಕ್ಕಳಿಗೆ ಲಸಿಕೆ ಹಾಕಲಾಗುವುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.