Sunday, January 19, 2025
Sunday, January 19, 2025

ಎಸ್.ಎಸ್.ಎಲ್.ಸಿ. ಪ್ರಶ್ನೆಪತ್ರಿಕೆ ವಿನ್ಯಾಸದಲ್ಲಿಲ್ಲ‌ ಬದಲಾವಣೆ

ಎಸ್.ಎಸ್.ಎಲ್.ಸಿ. ಪ್ರಶ್ನೆಪತ್ರಿಕೆ ವಿನ್ಯಾಸದಲ್ಲಿಲ್ಲ‌ ಬದಲಾವಣೆ

Date:

ಬೆಂಗಳೂರು, ನ.29: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ. 2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮ ವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!