Monday, April 20, 2026
Monday, April 20, 2026

ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಳಗಾವಿ, ಡಿ.14: ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗಖಾತ್ರಿ (ನರೇಗಾ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.

ನರೇಗಾ ಯೋಜನೆಯಡಿ ಅನುಮತಿಸಿದ ಕಾಮಗಾರಿಗಳಲ್ಲಿ ಸಮುದಾಯ ಆಧಾರಿತ ಉದ್ದೇಶಕ್ಕಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ರೀತಿಯ ಕಾಮಗಾರಿಗಳನ್ನು ನಿಯಮಾನುಸಾರ ಗ್ರಾಮ ಪಂಚಾಯತಿಯ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಂಡು ಅನುಷ್ಠಾನಗೊಳಿಸಬಹುದಾಗಿದೆ.

ಒಂದು ವೇಳೆ ಸ್ಥಳೀಯ ಅಧಿಕಾರಿಗಳು ಆ ರೀತಿ ತಪ್ಪು ಮಾಹಿತಿ ನೀಡಿದ್ದರೆ, ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ, ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಸಲ್ಲಿಸಲಾಗಿದೆ. ಅದೇ ರೀತಿ 15ನೇ ಹಣಕಾಸು ಆಯೋಗದಲ್ಲಿಯೂ ರಾಜ್ಯಕ್ಕೆ ಸುಮಾರು 2,500 ಕೋಟಿ ರೂ. ಅನುದಾನ ಬರಬೇಕಿದೆ. ಈ ಕುರಿತೂ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಅನುದಾನ ಬಂದ ಬಳಿಕ ಗ್ರಾಮ ಪಂಚಾಯತಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಾದ್ಯಂತ ಎಲ್‌ಪಿಜಿ ಸರಬರಾಜು ಸ್ಥಿರ: ಸರ್ಕಾರ

ನವದೆಹಲಿ, ಏ.20: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಉಂಟಾದ ಅಡೆತಡೆಗಳ ನಡುವೆಯೂ, ದೇಶಾದ್ಯಂತ...

ಬಿ.ಬಿ. ಹೆಗ್ಡೆ ಕಾಲೇಜು: ಹ್ಯಾಕಥಾನ್ ಕಾರ್ಯಕ್ರಮ

ಕುಂದಾಪುರ, ಏ.20: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ...

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!