Saturday, January 17, 2026
Saturday, January 17, 2026

ಭ್ರೂಣ ಹತ್ಯೆ ತಡೆಗಟ್ಟಲು ನೋಡಲ್ ಅಧಿಕಾರಿ ನೇಮಕ

ಭ್ರೂಣ ಹತ್ಯೆ ತಡೆಗಟ್ಟಲು ನೋಡಲ್ ಅಧಿಕಾರಿ ನೇಮಕ

Date:

ಬೆಳಗಾವಿ, ಡಿ.19: ರಾಜ್ಯಾದ್ಯಂತ ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರ ನೀಡಿದರು.

ರಾಜ್ಯದ ಕೆಲ ಜಿಲ್ಲೆಗಳಲ್ಲಿ, ಕೆಲ ಆಸ್ಪತ್ರೆಗಳಲ್ಲಿಯೇ ಗಂಡು ಸಂತಾನವು ಗರಿಷ್ಟ ಪ್ರಮಾಣದಲ್ಲಿ ದಾಖಲಾಗುತ್ತಿರುವುದನ್ನು ಗುಪ್ತಚರ ದಾಳಿಯ ಮೂಲಕ ಕಂಡುಕೊಳ್ಳಲಾಗುತ್ತಿದೆ. ಯಾವ ತಾಲೂಕಿನಲ್ಲಿ ಗಂಡು ಹೆಣ್ಣಿನ ಅನುಪಾತ ಹೆಚ್ಚುತ್ತಿದೆ? ಯಾವ ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎನ್ನುವಂತಹ ಅಂಶಗಳ ಮೇಲೆ ಮೇಲ್ವಿಚಾರಣೆ ನಡೆಸಿ, ಅಂತಹ ಜಾಲವನ್ನು ಹತ್ತಿಕ್ಕಲು ಸೂಕ್ತ ಕ್ರಮವಹಿಸುತ್ತಿದ್ದೇವೆ.

ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ 2024-25 ನೇ ಸಾಲಿನಲ್ಲಿ ಬಸ್ ಬ್ರ್ಯಾಂಡಿಂಗ್‌, ಟ್ರೈನ್ ಬ್ರ್ಯಾಂಡಿಂಗ್‌, ಹೋರ್ಡಿಂಗ್ಸ್‌ ಗೋಡೆ ಬರಹ, ರೇಡಿಯೋ ಜಿಂಗಲ್ಸ್, ಟಿ.ವಿ. ಸ್ಪಾಟ್ಸ್ ಮುಖಾಂತರ ಸಾರ್ವಜನಿಕರಿಗೆ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯ ಕುರಿತು ಅರಿವು ಮೂಡಿಸಲಾಗುತ್ತಿದೆ.

ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಬಗ್ಗೆ ರಾಜ್ಯ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಲಕಾಲಕ್ಕೆ ಅರಿವು ಮೂಡಿಸುವ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!