Monday, February 24, 2025
Monday, February 24, 2025

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

Date:

ಉಡುಪಿ, ಸೆ.4: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮ ಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 19 ರ ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!