ಬೆಂಗಳೂರು, ನ. 17: ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಮೂಲಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್ ಅಶೋಕ್ ಆಯ್ಕೆಯಾದರು.
ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವೀಕ್ಷಕರಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ದುಶ್ಯಂತ್ ಗೌತಮ್ ಆಗಮಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರು ಉಪಸ್ಥಿತರಿದ್ದರು.