ಬೆಂಗಳೂರು, ಜೂ.29: ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಚಲ್ಲಘಟ್ಟದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು. ದೂರದೃಷ್ಟಿಯ ಮಹಾನ್ ಚೇತನ, ಕೆರೆಗಳನ್ನು ಕಟ್ಟಿದ ಭಗೀರಥ, ದೇವಸ್ಥಾನಗಳನ್ನು ನಿರ್ಮಿಸಿದ ದೈವ ಭಕ್ತ, ಪೇಟೆಗಳನ್ನು ನಿರ್ಮಿಸಿ ಎಲ್ಲಾ ಜಾತಿ – ಧರ್ಮದ ಜನತೆಗೆ ಸಮವಾಗಿ ಕಂಡು ಆರ್ಥಿಕ ಶಕ್ತಿಯನ್ನು ನೀಡಿದ ಕೆಂಪೇಗೌಡರ ದೂರದೃಷ್ಟಿಯ ಹಾದಿಯಲ್ಲಿ ನಮ್ಮ ಪಯಣ ಸಾಗಲಿದೆ ಎಂದು ಸಿಎಂ ಹೇಳಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಹಾದಿಯಲ್ಲಿ ನಮ್ಮ ಪಯಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಹಾದಿಯಲ್ಲಿ ನಮ್ಮ ಪಯಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Date:




By
ForthFocus™