Thursday, July 30, 2026
Thursday, July 30, 2026

ನಮ್ಮ ಶಾಲೆ ನಮ್ಮ ಜವಾಬ್ದಾರಿ

ನಮ್ಮ ಶಾಲೆ ನಮ್ಮ ಜವಾಬ್ದಾರಿ

Date:

ಬೆಂಗಳೂರು, ಸೆ.13: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಎಂಬ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಉದ್ಯೋಗಿಗಳು, ಉದ್ಯಮಿಗಳು, ಪಾಲಕರು ಮತ್ತು ಹಳೆ ವಿದ್ಯಾರ್ಥಿಗಳು ಶಾಲೆಗೆ ದೇಣಿಗೆ ನೀಡಿ ಪ್ರಗತಿಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ 45 ಸಾವಿರ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿವೆ. 56 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಪಿಯು ವಿದ್ಯಾರ್ಥಿಗಳೂ ಸೇರಿ ಒಟ್ಟು 1.05 ಕೋಟಿ ವಿದ್ಯಾರ್ಥಿಗಳಿದ್ದಾರೆ. ಕಳೆದ ದಶಕಗಳಲ್ಲಿ ಇಲ್ಲಿ ಕಲಿತು ಹೋದವರ ಸಂಖ್ಯೆ ಲೆಕ್ಕಕ್ಕೆ ಸಿಗದು. ಅವರು ತಾವು ಕಲಿತ ಶಾಲೆಗಳಿಗೆ ಮರಳಬೇಕು. ಕನಿಷ್ಠ ರೂ.5 ಸಾವಿರ ದೇಣಿಗೆ ನೀಡಬೇಕು ಅಥವಾ ಇಷ್ಟವಾದುದ್ದನ್ನು ಕೊಡುಗೆ ನೀಡಬೇಕು. ಇದರಿಂದ ಸರ್ಕಾರಿ ಶಾಲೆಗಳ ಚಿತ್ರಣವೇ ಬದಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಕಲಿತ ಸಿದ್ದರಾಮನಹುಂಡಿಯ ಸರ್ಕಾರಿ ಶಾಲೆಗೆ ರೂ.10 ಲಕ್ಷ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌. ಬಂಗಾರಪ್ಪ ಅವರು ಕಲಿತ ಶಾಲೆಗೆ ನಾನು ರೂ.10 ಲಕ್ಷ ದೇಣಿಗೆ ನೀಡಿದ್ದೇನೆ. ಹಲವು ಶಾಸಕರೂ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ. ಇದೊಂದು ಕ್ರಾಂತಿಕಾರಕ ನಡೆಯಾಗಬೇಕು. ಸರ್ಕಾರಿ ಶಾಲೆಗಳಿಗೆ ದೇಣಿಗೆ ಕೊಟ್ಟು ನೋಡಿ; ದೇಶದ ಭವಿಷ್ಯವೇ ಬದಲಾದಿತು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಬ್ಲಾಕ್ ಕಾಂಗ್ರೆಸ್: ಸಂಘಟನ್ ಸೃಜನ ಅಭಿಯಾನ

ಕಾರ್ಕಳ, ಜು.29: ಕಾರ್ಕಳ ಜೋಡುರಸ್ತೆಯ ಕುಲಾಲಭವನದ ಸಭಾಂಗಣದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸಿನ...

ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಉಡುಪಿ, ಜು.29: ಕಿನ್ನಿಮೂಲ್ಕಿಯ ಶಾಂತಾ ಬಿಲ್ಡಿಂಗ್ ನಲ್ಲಿ ಕಾರ್ಯಾರಂಭ ನಡೆಸುತ್ತಿರುವ ಕಿದಿಯೂರು...

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...
error: Content is protected !!