Sunday, January 19, 2025
Sunday, January 19, 2025

ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ

ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ

Date:

ಬೆಳಗಾವಿ, ಡಿ.19: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಅಥವಾ ಅವರೇ ಕೈಗಾರಿಕೆ ಸ್ಥಾಪಿಸಲು ಮುಂದಾದರೆ ನೆರವು ನೀಡುವ ಕುರಿತು ಪರಿಶೀಲಿಸುತ್ತೇವೆ.

ಪ್ರಸ್ತುತ ಇರುವ ಕಾಯ್ದೆಯ ಪ್ರಕಾರ ಕೆಐಎಡಿಬಿ ವಶಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಲಾಗುತ್ತಿದೆ. ಅವರು ಬಯಸಿದರೆ ಅಭಿವೃದ್ಧಿಗೊಳಿಸಿದ ಅವರ ಪ್ರದೇಶದಲ್ಲಿ ಪ್ರತಿ ಎಕರೆಗೆ ಪರ್ಯಾಯವಾಗಿ 10,781 ಚದರ ಅಡಿ ಜಾಗ ನೀಡಲಾಗುತ್ತಿದೆ.

ನಗರಾಭಿವೃದ್ದಿ ಪ್ರಾಧಿಕಾರಗಳು ರೈತರಿಂದ ಸ್ವಾಧೀನಪಡಿಸಿಕೊಂಡ ಜಮೀನಿನ ಬದಲಿಗೆ ಅಭಿವೃದ್ಧಿಪಡಿಸಲಾದ ನಿವೇಶನಗಳನ್ನು ನೀಡುವ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲೂ ರೈತರನ್ನೂ ಒಳಗೊಳ್ಳುವಂತೆ ಮಾಡಲು ಸೂಕ್ತ ನಿಯಮ ರೂಪಿಸಬೇಕಿದೆ ಎಂದು ಕೈಗಾರಿಕೆ ಸಚಿವರಾದ ಎಂ. ಬಿ. ಪಾಟೀಲ್ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!