ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ ಸುರಕ್ಷತೆಗೆ ಪ್ರಾರ್ಥಿಸಿ ಜನವರಿ 25 ರಂದು ಒಂದು ದಿನ ಉಪವಾಸ ಆಚರಿಸುವಂತೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ. ಜನವರಿ 23 ರಿಂದ 25 ರವರೆಗೆ ಕೋಟಿ ವಿಷ್ಣುಸಹಸ್ರನಾಮ ಪಾರಾಯಣ ಅಥವಾ ಶಿವಪಂಚಾಕ್ಷರಿ ಜಪ ಅಭಿಯಾನ ನಡೆಸುವಂತೆ ಪೇಜಾವರ ಶ್ರೀಗಳು ಕರೆ ನೀಡಿದ್ದಾರೆ. ರಾಜ್ಯದಲ್ಲಿ ಗೋವುಗಳ ಮೇಲೆ ಸಿಂಸೆ ನಡೆಸಿದವರಿಗೆ ಯಾವುದೇ ಶಿಕ್ಷೆ ಆಗುತ್ತಿಲ್ಲ. ಗೋವಿನ ಆರ್ತನಾದ ಸಮಾಜಕ್ಕೆ ಒಳ್ಳೆಯದಲ್ಲ, ಇದು ನೆಲದ ಕ್ಷಾಮಕ್ಕೆ ಕಾರಣವಾಗುತ್ತದೆ. ಸದ್ಯದ ಬೆಳವಣಿಗೆಗಳಿಂದ ಹಿಂದೂ ಸಮಾಜ ಆಘಾತಕ್ಕೆ ಒಳಗಾಗಿದೆ. ಗೋವುಗಳ ರಕ್ಷಣೆಗೆ ಮುಂದಾಗಬೇಕಿದೆ. ಈ ವಿಚಾರಕ್ಕೆ ಭಗವಂತನಿಗೆ ಶರಣಾಗಬೇಕಿದೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ
ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ
Date: