Thursday, October 15, 2026
Thursday, October 15, 2026

ಮೋದಿಗೆ ಬೊಮ್ಮಾಯಿ ಸಾಥ್; ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ 7 ರೂ ಕಡಿತ

ಮೋದಿಗೆ ಬೊಮ್ಮಾಯಿ ಸಾಥ್; ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ 7 ರೂ ಕಡಿತ

Date:

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿದ್ದು, ಜನರಿಗೆ ಮತ್ತಷ್ಟು ಹೆಚ್ಚಿನ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ 7 ರೂ.ಗಳಷ್ಟು ಕಡಿಮೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಡೀಸಲ್ 10 ರೂ. ಹಾಗೂ ಪೆಟ್ರೋಲ್ 05 ರೂ. ಕಡಿಮೆಗೊಳಿಸಿದ್ದು ಸ್ವಾಗತಾರ್ಹ. ಜನರಿಗೆ ದೀಪಾವಳಿಯ ಉಡುಗೊರೆ ನೀಡಿದ ಪ್ರಧಾನಿಗಳಿಗೆ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ. ಕಡಿಮೆಗೊಳಿಸಲು ನಿರ್ಧರಿಸಿದೆ.

ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2,100 ಕೋಟಿ ರೂ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ, ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಪೆಟ್ರ‍ೋಲ್ ಬೆಲೆಯಲ್ಲಿ 12 ರೂ, ಡೀಸೆಲ್ ಬೆಲೆಯಲ್ಲಿ 17 ರೂ ಕಡಿತವಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 95.50, ಡೀಸೆಲ್ 81.50 ಆಗಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!