Sunday, January 19, 2025
Sunday, January 19, 2025

ಮಲೆನಾಡಿನಲ್ಲಿ ಪ್ರಧಾನಿ ಮೋದಿ ರಣಕಹಳೆ

ಮಲೆನಾಡಿನಲ್ಲಿ ಪ್ರಧಾನಿ ಮೋದಿ ರಣಕಹಳೆ

Date:

ಶಿವಮೊಗ್ಗ, ಮಾ.18: ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ‘ಮತ್ತೊಮ್ಮೆ ಮೋದಿ’ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಂದಿನ ಬೃಹತ್ ಸಮಾವೇಶದಲ್ಲಿ ಕರ್ನಾಟಕದ ಮನಸ್ಥಿತಿಯನ್ನು ಕಾಣಬಹುದಾಗಿದೆ. ಕಾಂಗ್ರೆಸ್ ನ ಕಳಪೆ ಆಡಳಿತದಿಂದ ಜನರು ಈಗಾಗಲೇ ಹತಾಶರಾಗಿದ್ದಾರೆ. ವಿಕಸಿತ ಭಾರತಕ್ಕಾಗಿ ನಾವು 400 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಬೇಕಿದೆ. ವಿಕಸಿತ ಕರ್ನಾಟಕಕ್ಕಾಗಿ, ಬಡತನ ನಿರ್ಮೂಲನೆಗೊಳಿಸಲು, ಭಯೋತ್ಪಾದನೆ ನಿಗ್ರಹಕ್ಕಾಗಿ, ಯುವಜನತೆಗೆ ಹೊಸ ಅವಕಾಶ ನೀಡಲು‌‌, ರೈತರ ಕಲ್ಯಾಣಕ್ಕಾಗಿ ನಮ್ಮ ಘೋಷಣೆಯೊಂದೇ, ‘ಈ ಬಾರಿ 400 ಮೀರಿ’ ಎಂದು ಪ್ರಧಾನಿ ಹೇಳಿದರು. ಬಿಜೆಪಿ ಸರ್ಕಾರದ ಪ್ರಮುಖ ಉದ್ದೇಶಗಳೆಂದರೆ ಅಭಿವೃದ್ಧಿ, ಬಡವರ ಕಲ್ಯಾಣ ಮತ್ತು ಸಾಮರ್ಥ್ಯಯುಕ್ತ ಭಾರತ. ಆದರೆ ಕಾಂಗ್ರೆಸ್ ನ ಎದುರು ಸ್ಪಷ್ಟ ಯೋಜನೆಗಳೇ ಇಲ್ಲ. ಅವರು ಬೆಳಿಗ್ಗೆಯಿಂದ ರಾತ್ರಿಯವರೆಗೆ ಸುಳ್ಳನ್ನೇ ಅನೇಕ ಬಾರಿ ಹೇಳುತ್ತಾರೆ. ಈ ಸುಳ್ಳುಗಳನ್ನು ಮುಚ್ಚಲು ಮತ್ತಷ್ಟು ಸುಳ್ಳುಗಳನ್ನು ಹೇಳುತ್ತಾರೆ. ಕೊನೆಗೆ ಸಿಕ್ಕಿ ಬೀಳುವಾಗ ಇತರರ ಮೇಲೆ ಆರೋಪ ಹೊರಿಸುತ್ತಾರೆ ಎಂದು ಪ್ರಧಾನಿ ಹೇಳಿದರು.

ಕಾಂಗ್ರೆಸ್ ಗೆ ಅವಕಾಶ ಸಿಕ್ಕಾಗಲೆಲ್ಲಾ ಕರ್ನಾಟಕವನ್ನು ಎಟಿಎಂ ರೀತಿಯಲ್ಲಿ ಬಳಸಿದ್ದಾರೆ. ಇಲ್ಲಿ ಸಿಎಂ, ಸಿಎಂ ಆಕಾಂಕ್ಷಿ, ಭವಿಷ್ಯದ ಸಿಎಂ, ಸೂಪರ್ ಸಿಎಂ, ಶ್ಯಾಡೋ ಸಿಎಂ ಮತ್ತು ದೆಹಲಿಯಲ್ಲಿ ಕಲೆಕ್ಷನ್ ಮಿನಿಸ್ಟರ್ ಇದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡುವ ಮೊದಲು ಸಭಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಜನರತ್ತ ಕೈಬೀಸುತ್ತಲೆ ಆಗಮಿಸಿದರು. ಕಾರ್ಯಕ್ರಮಕ್ಕೆ ಆಗಮಿಸುವ ಮುನ್ನ ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ರೋಡ್ ಶೋ ನಡೆಸಿದರು.

ಸಮಾವೇಶದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಸಂಸದರಾದ ಜಿ.ಎಂ.ಸಿದ್ದೇಶ್ವರ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ, ಹರತಾಳು ಹಾಲಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಶಿವಮೊಗ್ಗ ಲೋಕಸಭಾ ಚುನಾವಣಾ ಉಸ್ತುವಾರಿ ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಶಾಸಕಿ ಶಾರದಾ ಪೂರ್ಯಾನಾಯಕ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಮಂಜುಳಾ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ವಿಧಾನಪರಿಷತ್ ಸದಸ್ಯರಾದ ರುದ್ರೇಗೌಡ, ಎನ್. ರವಿಕುಮಾರ್, ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಮುಖಂಡರಾದ ಭಾನುಪ್ರಕಾಶ್, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ್, ಶಾಸಕರು, ಮಾಜಿ ಶಾಸಕರು, ಪಕ್ಷದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!